ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ದಸರಾ ಹಿನ್ನಲೆಯಲ್ಲಿ ಸರ್ಕಾರವೇ ಸರ್ಕಾರಿ ಸೇರಿದಂತೆ ಖಾಸಗಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಅಕ್ಟೋಬರ್ 20ರ ತನಕ ರಜೆ ಘೋಷಿಸಿದೆ. ಆದರೆ, ಸರ್ಕಾರದ ಸುತ್ತೋಲೆ ಪರಿಗಣಿಸದೆ ತಾಲೂಕಿನಲ್ಲಿ ತರಗತಿಗಳನ್ನು ಕೆಲ ಶಾಲೆಗಳು ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ರಜೆ ನೀಡದೆ ಶಾಲೆ ನಡೆಸಿದರೆ ಅಂತಹ ಶಾಲೆಗಳ ಮಾನ್ಯತೆ ರದ್ದುಗೊಳಿಸುವಂತೆ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೇಳಿದ್ದಾರೆ.
ಅಕ್ಟೋಬರ್ 20ರ ತನಕ ರಜೆ ಘೋಷಿಸಿದ್ದರೂ ಅಕ್ಟೋಬರ್ 14ರಿಂದಲೇ ಅನೇಕ ಶಾಲೆಗಳು ಪ್ರಾರಂಭ ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಸರ್ಕಾರದ ನಿಯಮ ಮೀರಿ ಶಾಲೆ ನಡೆಸುತ್ತಿರುವ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮುಖ್ಯಸ್ಥರುಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದ್ದು, ಅಕ್ಟೋಬರ್ 20ರ ತನಕ ಶಾಲೆಗೆ ರಜೆ ನೀಡದೆ ತರಗತಿ ನಡೆಸಿದರೆ, ಕಠಿಣ ಕ್ರಮ ತೆಗೆದುಕೊಳ್ಳುವ ಕುರಿತು ತಿಳಿಸಲಾಗಿದೆ.