Ad imageAd image

ಬಿಜೆಪಿ ಅವಧಿಯಲ್ಲಿ 21 ಹಗರಣಗಳು: ಭೈರತಿ ಸುರೇಶ್

ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ಶನಿವಾರದಿಂದ ಪಾದಯಾತ್ರೆ ನಡೆಸಿದೆ.

Nagesh Talawar
ಬಿಜೆಪಿ ಅವಧಿಯಲ್ಲಿ 21 ಹಗರಣಗಳು: ಭೈರತಿ ಸುರೇಶ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ವಾಲ್ಮೀಕಿ ಅಭಿವೃದ್ಧಿ(Valmiki) ನಿಗಮ ಹಾಗೂ ಮೈಸೂರು ಅಭಿವೃದ್ಧಿ(MUDA) ಪ್ರಾಧಿಕಾರದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ಶನಿವಾರದಿಂದ ಪಾದಯಾತ್ರೆ ನಡೆಸಿದೆ. ಬೆಂಗಳೂರಿನಿಂದ ಮೈಸೂರು(Mysore) ತನಕ ಪಾದಯಾತ್ರೆ ಹಮ್ಮಿಕೊಂಡಿದೆ. ಇದರ ವಿರುದ್ಧ ಕಾಂಗ್ರೆಸ್ ನಿಂದಲೂ ಜನಾಂದೋಲನ ನಡೆಸಲಾಗಿದೆ. ಅಹಿಂದ ವರ್ಗಗಳ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿವೆ. ಕೆಲವು ಕಡೆ ಪ್ರತಿಭಟನೆಗೆ ಸಜ್ಜಾಗುತ್ತಿವೆ. ಕಾಂಗ್ರೆಸ್ ನವರು ಈಗ ಬಿಜೆಪಿ ಅವಧಿಯಲ್ಲಿ 21 ಹಗರಣಗಳು ನಡೆದಿದೆ ಎಂದು ಪೋಸ್ಟ್ ಹಾಕುತ್ತಿದ್ದಾರೆ.

ಸಚಿವ ಭೈರತಿ ಸುರೇಶ್(byrathi suresh) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಬಿಜೆಪಿ ಅವಧಿಯಲ್ಲಿ 21 ಹಗರಣಗಳು(Scam) ನಡೆದಿವೆ. ಇವರ ಸಾಲು ಸಾಲು ಭ್ರಷ್ಟಾಚಾರಗಳು ರಾಜ್ಯದ ಆರ್ಥಿಕ ಸ್ಥಿತಿ ಹಾಳು ಮಾಡಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅದನ್ನು ಸುಧಾರಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಸಹಿಸಲಾಗಿದೆ ಬಿಜೆಪಿ-ಜೆಡಿಎಸ್(BJP-JDS) ಪಾದಯಾತ್ರೆ ಮಾಡುತ್ತಿವೆ ಎಂದಿದ್ದಾರೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಹಂಚಿಕೊಂಡಿದ್ದಾರೆ.

WhatsApp Group Join Now
Telegram Group Join Now
Share This Article