ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿರುವ ನಡುವೆಯೇ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. 2024 ಮಾರ್ಚ್ 15ರಿಂದ ಭೋವಿ ನಗಮದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ನನ್ನ ಅವಧಿಯಲ್ಲಿ ನಿಗಮದಲ್ಲಿ ಯಾವುಏ ಅಕ್ರಮಗಳು ನಡೆದಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಅಕ್ರಮಗಳ ಬಗ್ಗೆ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿರುವುದು ಸರಿಯಾಗಿದೆ. ನಿಗಮದಲ್ಲಿ ಹಿಂದಿನಿಂದ ನಡೆದುಕೊಂಡು ಬರುತ್ತಿದ್ದ ಕೆಲವು ಅನುಚಿತ ವ್ಯವಹಾರ ಮತ್ತು ಅಶಿಸ್ತನ್ನು ನಾನು ಪತ್ತೆ ಹಚ್ಚಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಕ್ಕೆ ನನ್ನ ವಿರುದ್ಧ ಪಿತೂರಿ ನಡೆದು ನನ್ನ ತೇಜೋವಧೆ ಮಾಡುವ ಪ್ರಯತ್ನ ನಡೆದಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವತೆ ಕೇಳಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.