ಪ್ರಜಾಸ್ತ್ರ ಸುದ್ದಿ
ಪಾಟ್ನಾ(Patna): ಬಿಹಾರ ವಿಧಾನಸಭಾ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಇದೀಗ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 48 ಅಭ್ಯರ್ಥಿಗಳಿರುವ ಮೊದಲ ಪಟ್ಟಿಯನ್ನು ಗುರುವಾರ ತಡರಾತ್ರಿ ಬಿಡುಗಡೆ ಮಾಡಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ಆರ್ ಜೆಡಿ ಜೊತೆಗೆ ಮೈತ್ರಿ ಕುರಿತು ಮಾತುಕತೆ ನಡೆಯುತ್ತಿರುವ ನಡುವೆಯೇ ಅಭ್ಯರ್ಥಿಗಳನ್ನು ಘೋಷಿಸಿದೆ. ಎಡ ಪಕ್ಷಗಳೊಂದಿಗೂ ಸೀಟು ಹಂಚಿಕೆ ಮಾತುಕತೆ ನಡೆದಿದೆ. 243 ವಿಧಾನಸಭಾ ಕ್ಷೇತ್ರಗಳನ್ನು ಬಿಹಾರ ಹೊಂದಿದೆ. ನವೆಂಬರ್ 6 ಹಾಗೂ 11ರಂದು ಮತದಾನ ನಡೆಯಲಿದೆ. 2ನೇ ಹಂತದ ಚುನಾವಣೆಗೆ ಅಕ್ಟೋಬರ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.




