ಪ್ರಜಾಸ್ತ್ರ ಸುದ್ದಿ
ಪಾಟ್ನಾ(Patna): ಬಿಹಾರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಜೆಡಿ(ಯು) ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ 57 ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದೆ. ಬಿಜೆಪಿ ಹಾಗೂ ಜೆಡಿ(ಯು) ನಡುವೆ ಸೀಟು ಹಂಚಿಕೆಯಿಂದಾಗಿ ತಲಾ 101 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಉಳಿದ ಕ್ಷೇತ್ರಗಳಲ್ಲಿ ಎನ್ ಡಿಎ ಮೈತ್ರಿಕೂಟದ ಇತರೆ ಪಕ್ಷಗಳು ಕಣಕ್ಕೆ ಇಳಿಯಲಿವೆ.
ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 14ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಸೀಟು ಹಂಚಿಕೆ ವಿಚಾರದಲ್ಲಿ ಎಚ್ಎಎಂ ಹಾಗೂ ಆರ್ ಎಲ್ಎಂ ಪಕ್ಷಗಳ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾಕಂದರೆ ಇವರಿಗೆ ತಲಾ 6 ಕ್ಷೇತ್ರಗಳನ್ನು ಬಿಟ್ಟು ಕೊಡಲಾಗಿದೆ. ಎಲ್ ಜೆಪಿ(ರಾಮ್ ವಿಲಾಸ್) ಪಕ್ಷಕ್ಕೆ 29 ಕ್ಷೇತ್ರಗಳಲ್ಲಿ ಬಿಟ್ಟು ಕೊಡಲಾಗಿದೆ.