ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ನವೆಂಬರ್ 6 ಹಾಗೂ 11ರಂದು ಎರಡು ಹಂತದಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಸೋಮವಾರ ತಿಳಿಸಿದೆ. ನವೆಂಬರ್ 14ರಂದು ಫಲಿತಾಂಶ ಹೊರ ಬೀಳಲಿದೆ ಎಂದು ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಹೇಳಿದ್ದಾರೆ.
ಮೊದಲ ಹಂತದಲ್ಲಿ 121 ಕ್ಷೇತ್ರ, ಎರಡನೇ ಹಂತದಲ್ಲಿ 122 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೊದಲ ಹಂತದ ಅಧಿಸೂಚನೆ ಅಕ್ಟೋಬರ್ 10, ಎರಡನೇ ಹಂತದ ಅಧಿಸೂಚನೆ ಅಕ್ಟೋಬರ್ 13ರಂದು ಪ್ರಕಟವಾಗಲಿದೆ. ಬಿಹಾರದಲ್ಲಿ ಒಟ್ಟು 7.43 ಕೋಟಿ ಮತದಾರರಿದ್ದಾರೆ. 14 ಲಕ್ಷ ಹೊಸ ಮತದಾರರು, 90,712 ಮತಗಟ್ಟೆಗಳು ಸ್ಥಾಪಿಸಲಾಗುತ್ತಿದೆ.