ಪ್ರಜಾಸ್ತ್ರ ಸುದ್ದಿ
ತಾಳಿಕೋಟೆ(Taalikote: ನಿಂತಿದ್ದ ಟ್ರ್ಯಾಕ್ಟರ್ ಟೇಲರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಕ್ಯಾಳ ಹತ್ತಿರದ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಶಫೀಕ್ ಹಸನಸಾಬ ಯಕೀನ್(24) ಸಾವನಪ್ಪಿರುವ ದುರ್ದೈವಿ ಎಂದು ತಿಳಿದು ಬಂದಿದೆ.
ಮುದ್ದೇಬಿಹಾಳದ ಅವಟಿ ಓಣಿಯ ನಿವಾಸಿಯಾದ ಶಫೀಕ್ ತಾಳಿಕೋಟೆಯಲ್ಲಿ ತಮ್ಮ ಸಂಬಂಧಿಕರನ್ನು ಭೇಟಿಯಾಗಿ ಮುದ್ದೇಬಿಹಾಳಕ್ಕೆ ಹಿಂತಿರುಗಿ ಬರುತ್ತಿರುವಾಗ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.