ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕೆಎಸ್ಆರ್ ಟಿಸಿ ಬಸ್ ಹಿಂಬದಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಸುಕಿನಜಾವ ಸುಮಾರು 4 ಗಂಟೆ ವೇಳೆ ಮೈಸೂರು ಬ್ಯಾಂಕ್ ವೃತ್ತದ ಹತ್ತಿರ ನಡೆದಿದೆ. ಮೊಹಮ್ಮದ್ ಅಜರ್ ಮೃತ ಬೈಕ್ ಸವಾರ ಎಂದು ತಿಳಿದು ಬಂದಿದೆ.
ವೇಗವಾಗಿ ಬಂದಂತಹ ಬೈಕ್ ಸವಾರ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ವೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.