ಪ್ರಜಾಸ್ತ್ರ ಸುದ್ದಿ
ತುಮಕೂರು(Tumakoru): ಬೈಕ್ ಹಾಗೂ ಕ್ರೂಸರ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಶಿರಾ ತಾಲೂಕಿನ ತರೂರು ಗೇಟ್ ಹತ್ತಿರ ಕಳೆದ ರಾತ್ರಿ ನಡೆದಿದೆ. ಮೃತರ ಕುರಿತು ಇನ್ನು ಸರಿಯಾದ ಮಾಹಿತಿ ತಿಳಿದು ಬಂದಿಲ್ಲ. ಶಿರಾ ಕಡೆ ಹೊರಟ್ಟಿದ್ದ ಬೈಕ್ ಗೆ ಹಿಂದಿನಿಂದ ಬಂದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.
ಅಪಘಾತದಿಂದಾಗಿ ಬೈಕ್ ನಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ವೇಳೆ ಕ್ರೂಸರ್ ರಸ್ತೆ ಪಕ್ಕ ಉರುಳಿ ಬಿದ್ದಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ. ಮೃತರ ಗುರುತು ಪತ್ತೆ ಹಚ್ಚುವ ಕೆಲಸ ನಡೆದಿದೆ.