Ad imageAd image

ನೀಟ್ ಪರೀಕ್ಷೆ ರದ್ದುಗೊಳಿಸುವ ಮಸೂದೆ ಅಂಗೀಕಾರ

ರಾಜ್ಯ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ನೀಟ್ ಪರೀಕ್ಷೆ ರದ್ದುಗೊಳಿಸುವ ನಿರ್ಣವನ್ನು ಮಂಡಿಸಲಾಗಿದೆ. ಇದಕ್ಕೆ ಎರಡೂ ಸದನಗಳಲ್ಲಿ ಅಂಗೀಕಾರ ಸಿಕ್ಕಿದೆ.

Nagesh Talawar
ನೀಟ್ ಪರೀಕ್ಷೆ ರದ್ದುಗೊಳಿಸುವ ಮಸೂದೆ ಅಂಗೀಕಾರ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Benagaloru): ರಾಜ್ಯ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ನೀಟ್(NEET-UG) ಪರೀಕ್ಷೆ ರದ್ದುಗೊಳಿಸುವ ನಿರ್ಣವನ್ನು ಮಂಡಿಸಲಾಗಿದೆ. ಇದಕ್ಕೆ ಎರಡೂ ಸದನಗಳಲ್ಲಿ ಅಂಗೀಕಾರ ಸಿಕ್ಕಿದೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ(Sharanaprakash patil) ವಿಧಾನಸಭೆಯಲ್ಲಿ ಮಂಡಿಸಿದ ಮಸೂದೆಗೆ ಅಂಗೀಕಾರ ಸಿಕ್ಕಿದೆ.

ನೀಟ್ ಪರೀಕ್ಷೆಯಿಂದಾಗಿ ಗ್ರಾಮೀಣ(Rural) ಭಾಗದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಅಲ್ಲದೆ ರಾಜ್ಯದಲ್ಲಿನ ವೈದ್ಯಕೀಯ ಕಾಲೇಜುಗಳನ್ನು ಕೇಂದ್ರ ಸರ್ಕಾರ ಕಸೆದುಕೊಳ್ಳುತ್ತಿದೆ. ಇದರಿಂದಾಗಿ ನೀಟ್ ಪರೀಕ್ಷೆ ರದ್ದುಗೊಳಿಸುವ ಕೆಲಸವಾಗಬೇಕು ಎಂದರು. ಇನ್ನು ಉಪ ಮುಖ್ಯಮಂತ್ರಿ(DCM) ಡಿ.ಕೆ ಶಿವಕುಮಾರ್ ಪರಿಷತ್ತಿನಲ್ಲಿ ಮಂಡಿಸಿದರು. ಪರಿಷತ್ತಿನಲ್ಲೂ ಅಂಗೀಕಾರ ಸಿಕ್ಕಿದೆ.

ಈಗಾಗ್ಲೇ ಪಶ್ಚಿಮ(West Bengala) ಬಂಗಾಳ, ತಮಿಳುನಾಡು(Tamilunadu) ವಿಧಾನಸಭೆಯಲ್ಲಿ ನೀಟ್ ಪರೀಕ್ಷೆ ರದ್ದುಗೊಳಿಸಬೇಕು ಅನ್ನೋ ಮಸೂದೆಗೆ ಅಂಗೀಕಾರ ಸಿಕ್ಕಿದೆ. ಈಗ ಕರ್ನಾಟಕ ಆ ಸಾಲಿಗೆ 3ನೇ ರಾಜ್ಯವಾಗಿದೆ. ಎಲ್ಲ ಪಕ್ಷಗಳಿಂದ ಸರ್ವಾನುಮತದಿಂದ ಒಪ್ಪಿಗೆ ಸಿಕ್ಕಿದೆ. ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮದ ಬಗ್ಗೆ ಈಗಾಗ್ಲೇ ದೇಶದ ತುಂಬಾ ಪ್ರತಿಭಟನೆಗಳು ನಡೆದಿವೆ. ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದೆ. ಪರೀಕ್ಷೆ ರದ್ದುಗೊಳಿಸಿ ಮರುಪರೀಕ್ಷೆ ಒಂದೇ ಪರಿಹಾರವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದರಿಂದ ಅನ್ಯಾಯಕ್ಕೆ ಒಳಗಾದ ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿದೆ.

WhatsApp Group Join Now
Telegram Group Join Now
Share This Article