ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕಾಂಗ್ರೆಸ್ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಅವರ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ತುಂಬ ಕಾಮಣ್ಣರು ಎನ್ನುವ ಅಡಿಬರಹದೊಂದಿಗೆ ವಾಗ್ದಾಳಿ ನಡೆಸಲಾಗಿದೆ. ಕಾಮಣ್ಣರೆ ತುಂಬಿರುವ ಕಾಂಗ್ರೆಸ್ ನಲ್ಲಿ ಭ್ರಷ್ಟಾಚಾರಿಗಳ ಜೊತೆ ಹೆಣ್ಣುಬಾಕರು ಹೆಜ್ಜೆ ಹೆಜ್ಜೆಗೂ ಸಿಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಲಾಗಿದೆ.
ಕೂಡಲೇ ಅತ್ಯಾಚಾರಿ, ಕಾಮುಕ ವಿನಯ್ ಕುಲಕರ್ಣಿಯನ್ನು ಬಂಧಿಸಿ. ಅತ್ಯಾಚಾರಕ್ಕೊಳಗಾದ ಮಹಿಳೆಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸುತ್ತೇವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿ ಕಾರಲಾಗಿದೆ.