ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಯಾವುದೇ ಸಂಘ ಸಂಸ್ಥೆಗಳಾಗಲಿ ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ಮಾಡಲು ಅನುಮತಿ ಪಡೆಯಬೇಕು. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗಲೇ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ನಾವು ಆರ್ ಎಸ್ಎಸ್ ಟಾರ್ಗೆಟ್ ಮಾಡುತ್ತಿಲ್ಲ. ಕರ್ನಾಟಕದಲ್ಲಿ ಬಿಜೆಪಿಯಿಂದ ಶಾಂತಿಭಂಗ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರೀ ರಾಜಕಾರಣದಲ್ಲಿ ತೊಡಗುವುದು ಬಿಜೆಪಿ ಕೆಲಸ. ಜನತೆ, ಬಡವರ ಪರ ಕೆಲಸ ಮಾಡುವುದೇ ಇಲ್ಲ ಎಂದರು. ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಭಗವಾಧ್ವಜ ಹರಿದ ಪ್ರಕರಣ ಸಂಬಂಧ ಕೇಳಿದ ಪ್ರಶ್ನೆಗೆ, ಅದರ ಬಗ್ಗೆ ನನಗೆ ಗೊತ್ತಿಲ್ಲ. ಮಾಹಿತಿ ಪಡೆದು ಉತ್ತರಿಸುತ್ತೇನೆ ಎಂದರು.