ಪ್ರಜಾಸ್ತ್ರ ಸುದ್ದಿ
ಮಂಗಳೂರು(Mangaloru): ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಗೆ ಗುಪ್ತಾಂಗ ತೋರಿಸಿದ ಘಟನೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯ್ತಿ ಉಪಾಧ್ಯಕ್ಷನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಪದ್ಮನಾಭ ಸಫಲ್ಯ ಎಂಬುವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಉಚ್ಛಾಟಿಸಲಾಗಿದೆ ಎಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ತಿಳಿಸಿದ್ದಾರೆ.
ಮನೆಯ ದಾರಿಗೆ ಗೇಟು ಅಳವಡಿಸುತ್ತಿರುವುದನ್ನು ಪ್ರಶ್ನಿಸಿದ ಮಹಿಳೆಗೆ ಪದ್ಮನಾಭ ಸಫಲ್ಯ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದಾನೆ. ಈ ಕುರಿತು ಮಹಿಳೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಮಹಿಳೆಗೆ ಅಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿ ಸದಸ್ಯತ್ವದಿಂದ ಉಚ್ಛಾಟಿಸಲಾಗಿದ್ದು, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡುವಂತೆ ಮಂಡಲ ಅಧ್ಯಕ್ಷ ಸೂಚಿಸಿದ್ದಾರೆ.