ಪ್ರಜಾಸ್ತ್ರ ಸುದ್ದಿ
ಹಾಸನ(Hasana): ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಹೀನಾಯ ಸೋಲಾಗಿದೆ. ಮೂರೂ ಕ್ಷೇತ್ರಗಳಲ್ಲಿ ಸೋಲಿನ ಕಹಿ ಸಿಕ್ಕಿದೆ. ಈಗ ಹಾಸನ ನಗರಸಭೆಯ ಉಪ ಚುನಾವಣೆಯಲ್ಲೂ ಎನ್ ಡಿಎ ಪರಾಭವಗೊಂಡಿದೆ. 8 ಸ್ಥಾನಗಳಲ್ಲಿ 7ರಲ್ಲಿ ಕಾಂಗ್ರೆಸ್, 1ರಲ್ಲಿ ಪಕ್ಷೇತರ ಅಭ್ಯರ್ಥಿಗೆ ಗೆಲುವಾಗಿದೆ.
ಜೆಡಿಎಸ್ ಚಿಹ್ನೆಯಲ್ಲಿ ಗೆದ್ದು 7 ಜನರು ಸದಸ್ಯರಾಗಿದ್ದವರು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದರು. ಹೀಗಾಗಿ ಅವರ ಸದಸ್ಯತ್ವ ಅನರ್ಹಗೊಳಿಸಲಾಗಿತ್ತು. ಒಬ್ಬರು ರಾಜೀನಾಮೆ ನೀಡಿದ್ದರು. ಹೀಗಾಗಿ ನವೆಂಬರ್ 23ರಂದು ಉಪ ಚುನಾವಣೆ ನಡೆದಿದೆ. ಇಂದು ಫಲಿತಾಂಶ ಬಂದಿದೆ. 8 ವಾರ್ಡ್ ಗಳಲ್ಲಿ 7ರಲ್ಲಿ ಕಾಂಗ್ರೆಸ್, 1ರಲ್ಲಿ ಪಕ್ಷೇತರ ಅಭ್ಯರ್ಥಿ ವಿಜಯ ದಾಖಲಿಸಿದ್ದಾರೆ. ಈ ಮೂಲಕ ಬಿಜೆಪಿ-ಜೆಡಿಎಸ್ ಲೆಕ್ಕಾಚಾರ ಉಲ್ಟಾ ಆಗಿದೆ. ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ವಿಜಯೋತ್ಸವ ಆಚರಿಸಿದ್ದಾರೆ.