ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡನನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ಶಿರವಾಳ ಹತ್ತಿರ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ನೆಲೋಗಿ ಪಿಎಸ್ಐ ಹೇಳಿದ್ದಾರೆ.
ಗುರುವಾರ ಸಂಜೆ ನಾರಾಯಣಪುರಕ್ಕೆ ತೆರಳಿದ್ದ ಮಣಿಕಂಠ ರಾಠೋಡ, ಈ ಗ್ರಾಮದ ರಶೀದ್ ಮುತ್ಯಾ, ಜನರ ನಂಬಿಕೆಯೊಂದಿಗೆ ಆಟವಾಡುತ್ತಿದ್ದಾನೆ. ದರ್ಗಾಗೆ ಬಂದ ಜನರಿಗೆ ಮೋಸ ಮಾಡುತ್ತಿದ್ದಾನೆ. ದೇವರ ಹೆಸರಲ್ಲಿ ಹಣ, ಚಿನ್ನಾಭರಣ ಹಾಗೂ ವೈಯಕ್ತಿಕ ಲಾಭ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿ ಪ್ರತಿಭಟನೆ ಮಾಡಿದ್ದಾರೆ. ಗ್ರಾಮದಿಂದ ಗಡಿಪಾರು ಮಾಡಬೇಕು ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆ ವೇಳೆ ಗಲಾಟೆಯಾಗಿದೆ. ಆಗ ರಶೀದ್ ಮುತ್ಯಾ, ಆತನ ಕಾರು ಚಾಲಕ ಜುಬೇರ್, ಭಾಗೇಶ್ ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ. ಅವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಭಾಗೇಶ್ ನೀಡಿದ ದೂರಿನ ಆಧಾರದ ಮೇಲೆ ಮಣಿಕಂಠ ರಾಠೋಡರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ.




