ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಭಾರತದ ಪ್ರತಿಯೊಬ್ಬರು ಸೇರಿದಂತೆ ವಿಶ್ವದ ಹಲವು ನಾಯಕರು ಸಹ ಖಂಡಿಸಿದ್ದಾರೆ. ಉಗ್ರರ ವಿರುದ್ಧ ಸೇಡು ತೀರಿಸಿಕೊಳ್ಳಬೇಕು ಎನ್ನುವ ಕೂಗು ಎದ್ದಿದೆ. ಇದಕ್ಕೂ ಮೊದಲು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ಕೇಳಿ ಎಂದು ಸ್ವತಃ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರತಿಕಾರ ಕೇಳುವ ಮೊದಲು ಮೋದಿ, ಶಾ ರಾಜೀನಾಮೆ ಕೇಳಿ. ಅವರು ಏನೆಂದು ಹಲವು ಬಾರಿ ತಿಳಿದಿದೆ. ಚೀನಾ, ಪಾಕಿಸ್ತಾನ್, ಮಾಲ್ಡೀವ್ಸ್, ಬಾಂಗ್ಲಾದೇಶ ವಿಚಾರದಲ್ಲಿ ಇಬ್ಬರು ಶರಣಾಗಿದ್ದಾರೆ. ಭಾರತ ಮಾತೆಯನ್ನು ಅವಮಾನಿಸಲಾಗಿದೆ ಎಂದು ಬರೆಯುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.