Ad imageAd image

ರಾಜ್ಯಪಾಲರ ನಡೆ ಸಮರ್ಥಿಸಿಕೊಂಡ ಬಿಜೆಪಿ ನಾಯಕರು

Nagesh Talawar
ರಾಜ್ಯಪಾಲರ ನಡೆ ಸಮರ್ಥಿಸಿಕೊಂಡ ಬಿಜೆಪಿ ನಾಯಕರು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಸದನ ಉದ್ದೇಶಿಸಿ ಸರ್ಕಾರ ಸಿದ್ಧಪಡಿಸಿದ ಭಾಷಣ ಓದದೆ, ತಾವೇ ಸಿದ್ಧಪಡಿಸಿಕೊಂಡ ಭಾಷಣ ಓದಿದ್ದನ್ನು ಬಿಜೆಪಿ ನಾಯಕರು ಸಮರ್ಥಿಸಿಕೊಂಡಿದ್ದಾರೆ. ರಾಜ್ಯಪಾಲರಿಗೆ ವಿಧಾನಸಭೆ ಹಾಗೂ ಪರಿಷತ್ತಿನ ಕಾಂಗ್ರೆಸ್ ಸದಸ್ಯರು ಅಗೌರವ ತೋರಿಸಿದ್ದಾರೆ. ಕೂಡಲೇ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಸಭಾಧ್ಯಕ್ಷರಿಗೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ಮನವಿ ಮಾಡಿದ್ದಾರೆ.

ಸಂವಿಧಾನದ 175ನೇ ಅನುಚ್ಛೇದದ ಪ್ರಕಾರ ಸದನದ ಆದೇಶ ಉಲ್ಲಂಘಿಸಿದ ಸದಸ್ಯರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ರಾಜ್ಯಪಾಲರು ಭಾಷಣ ಮಾಡುವ ಮೊದಲು, ಮಾಡಿದ ನಂತರ ಅಡ್ಡಿ ಉಂಟು ಮಾಡಬಾರದು. ಅಂತ ಅಡ್ಡಿ ಹಾಗೂ ವಿಘ್ನವನ್ನು ಸದನದ ಆದೇಶದ ತೀವ್ರ ಉಲ್ಲಂಘನೆಯೆಂದು ಪರಿಗಣಿಸಿ ಅಗೌರವ ತೋರಿದ ಸದಸ್ಯರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಕೋರುತ್ತೇನೆ ಅಂತಾ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದಾರೆ.

ಇನ್ನು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಮುಡಾ ಹಗರಣ, ವಾಲ್ಮೀಕಿ ಹಗರಣ, ಶೇಕಡ 40ರಷ್ಟು ಕಮಿಷನ್ ಆರೋಪಗಳು ಸರ್ಕಾರವನ್ನು ಜನರ ಮುಂದೆ ನಗ್ನಗೊಳಿಸಿದೆ. ಈ ಹಗರಣಗಳಿಂದ ಜನರ ಗಮನ ತಪ್ಪಿಸಲು ರಾಜ್ಯಪಾಲರ ಭಾಷಣವನ್ನು ವಿವಾದಕ್ಕೆ ತರುತ್ತಿದ್ದಾರೆ. ರಾಜ್ಯಪಾಲರ ವಿರುದ್ಧ ಗೂಂಡಾಗಿರಿ ಮಾಡಿರುವ ಕಾಂಗ್ರೆಸ್ ಸದಸ್ಯರ ಹೊಣೆಗಾರಿಕೆಯನ್ನು ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಬೇಕು ಎಂದು ಕಿಡಿ ಕಾರಿದ್ದಾರೆ.

WhatsApp Group Join Now
Telegram Group Join Now
Share This Article