ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಕಣ ರಂಗೇರುತ್ತಿದೆ. ಮತದಾನಕ್ಕೆ ಇನ್ನೊಂದು ವಾರ ಉಳಿದಿದ್ದು, ಭಾನುವಾರ ಬಿಜೆಪಿ(BJP) ತನ್ನ ಪ್ರಣಾಳಿಕೆ(Manifesto) ಬಿಡುಗಡೆ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಕಲ್ಪ ಪತ್ರ ಹೆಸರಿನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಮಹಿಳೆಯರು, ಯುವಕರು, ರೈತರ ಮೇಲೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದು ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೀಂದ್ರ ಫಡ್ನಾವಿಸ್, ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್, ಕೇಂದ್ರ ಸಚಿವ ಪಿಯೂಶ್ ಗೊಯಲ್ ಸೇರಿದಂತೆ ಇತರೆ ನಾಯಕರು ಭಾಗವಹಿಸಿದ್ದರು. ಮಹಾರಾಷ್ಟ್ರದಲ್ಲಿ 288 ವಿಧಾನಸಭಾ ಕ್ಷೇತ್ರಗಳಿವೆ. ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ.