Ad imageAd image

ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿಯಿಂದ ಇಲ್ಲಸಲ್ಲದ ಆರೋಪ: ಶಾಸಕ ಅಶೋಕ ಮನಗೂಳಿ

Nagesh Talawar
ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿಯಿಂದ ಇಲ್ಲಸಲ್ಲದ ಆರೋಪ: ಶಾಸಕ ಅಶೋಕ ಮನಗೂಳಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಬಿಜೆಪಿ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ಆತನ ಬರೆದ ಡೆತ್ ನೋಟ್ ನಲ್ಲಿ ಪ್ರಿಯಾಂಕ್ ಖರ್ಗೆ ಅವರ ಹೆಸರಿಲ್ಲ. ಇದರಲ್ಲಿ ನನ್ನ ಪಾತ್ರವಿಲ್ಲ. ಸಿಐಡಿ ತನಿಖೆಗೆ ಕೊಡಿ ಎಂದು ಸ್ವತಃ ಅವರೆ ಹೇಳಿದ್ದಾರೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಬುಧವಾರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಈ ರೀತಿ ಹೇಳಿದರು.

ಬಿ.ವೈ ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ, ಸಿ.ಟಿ ರವಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅಂಬೇಡ್ಕರ್ ಅವರ ಬಗ್ಗೆ ಅಗೌರವದಿಂದ ಮಾತನಾಡಿದ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಸಮರ್ಥಿಸಿಕೊಳ್ಳುತ್ತಾರೆ. ಮಹಿಳಾ ಸಚಿವರಿಗೆ ಅವಮಾನವಾಗುವ ರೀತಿಯಲ್ಲಿ ಮಾತನಾಡಿದ ಸಿ.ಟಿ ರವಿಯವರಿಗೆ ಜಾಮೀನು ಸಿಕ್ಕರೆ ಜೈಕಾರ ಹಾಕುತ್ತಾರೆ. ಪ್ರಿಯಾಂಕ್ ಖರ್ಗೆಯವರು ಸಮರ್ಥವಾಗಿ ಸಚಿವ ಸ್ಥಾನ ನಿಭಾಯಿಸುತ್ತಿದ್ದಾರೆ. ನಮ್ಮ ಸರ್ಕಾರ ಪಾರದರ್ಶಕವಾಗಿ ಇರುವುದು ಬಿಜೆಪಿ ಸಹಿಸಲು ಆಗುತ್ತಿಲ್ಲ. ಈ ಹಿಂದೆ ಚಿತ್ತಾಪುರದಲ್ಲಿ 30 ಪ್ರಕರಣಗಳಿರುವ ಮಣಿಕಂಠ ರಾಠೋಡ ಬಿಜೆಪಿ ಅಭ್ಯರ್ಥಿಯಾಗಿದ್ದರು. ಹೀಗಾಗಿ ನಮ್ಮ ಸರ್ಕಾರದ ವಿರುದ್ಧ ಮಾತನಾಡುವ ಯಾವ ನೈತಿಕತೆ ಇಲ್ಲವೆಂದು ವಾಗ್ದಾಳಿ ನಡೆಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ ಮಾತನಾಡಿ, ಸಂವಿಧಾನದ ಬಗ್ಗೆ ಗೌರವಿದೆ ಎಂದು ಹೇಳುತ್ತಲೇ ಬಿಜೆಪಿಯವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡುತ್ತಾರೆ. ಸಿಎಂ ಸಿದ್ದರಾಮಯ್ಯ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅಗೌರವದಿಂದ ಮಾತನಾಡಿದರು. ಈಗ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿನಾಃಕಾರಣ ಆರೋಪ ಮಾಡುತ್ತಿದ್ದಾರೆ. ಇದನ್ನು ಖಂಡಿಸುತ್ತೇವೆ ಎಂದರು. ಪಕ್ಷದ ಮುಖಂಡ ವೈ.ಸಿ ಮಯೂರ ಮಾತನಾಡಿ, ದಲಿತ ನಾಯಕರಾದ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿಯವರು ಸುಳ್ಳುಗಳನ್ನು ಸೃಷ್ಟಿಸುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ನಾವೂ ಕೂಡ ತಕ್ಕ ಉತ್ತರವನ್ನು ಕೊಡುತ್ತೇವೆ ಎಂದರು. ಈ ವೇಳೆ ಕೆಪಿಸಿಸಿ ಸದಸ್ಯ ಎಂ.ಎ ಖತೀಬ, ರಮೇಶ ಮೇಲಿನಮನಿ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article