ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಳಿಕ ಬಿಜೆಪಿ ಇದೀಗ ಮತ್ತಿಬ್ಬರು ಶಾಸಕರನ್ನು ಉಚ್ಛಾಟನೆ ಮಾಡಿದೆ. ಬೆಂಗಳೂರಿನ ಯಶವಂತಪುರ ಶಾಸಕ ಎಸ್.ಟಿ ಸೋಮಶೇಖರ್ ಹಾಗೂ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಬಿಜೆಪಿ ಕೇಂದ್ರ ಶಿಸ್ತು ಸಮಿತಿ 2025 ಮಾರ್ಚ್ 25ರಂದು ನೋಟಿಸ್ ನೀಡಿದ್ದರೂ ಪದೆಪದೆ ಪಕ್ಷದ ಶಿಸ್ತು ಉಲ್ಲಂಘಿಸಲಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪಕ್ಷ ತಕ್ಷಣದಿಂದ ಜಾರಿಗೆ ಬರುವಂತೆ ಪ್ರಾಥಮಿಕ ಸದಸ್ಯತ್ವ ಹಾಗೂ ಈಗ ಹೊಂದಿರುವ ಯಾವುದೇ ಹುದ್ದೆಯಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ ಎಂದು ತಿಳಿಸಲಾಗಿದೆ. ಅಲ್ಲಿಗೆ ಬಿಜೆಪಿಯಿಂದ ಒಬ್ಬೊಬ್ಬರನ್ನೇ ಗೇಟ್ ಪಾಸ್ ಕೊಡಲಾಗುತ್ತಿದೆ.