Ad imageAd image

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಕೂಡಲೇ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತೊಲಗಲಿ

Nagesh Talawar
ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಕೂಡಲೇ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತೊಲಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ವಿಧಾನಸೌಧ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಎದುರು ಸೋಮವಾರ ಬಿಜೆಪಿ ಪ್ರತಿಭಟನೆ ನಡೆಸಿ ಸಿಎಂ ರಾಜೀನಾಮೆಗೆ ಆಗ್ರಹಿಸಿತು. ಈ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಸಮಾಜವಾದದ ಮುಖವಾಡ ಕಳಚಿದೆ ಎಂದರು.

ಮೈಸೂರು ಅಭಿವೃದ್ಧಿ(MUDA Scam) ಪ್ರಕರಣದಲ್ಲಿ ಸಾವಿರಾರ ಕೋಟಿ ರೂಪಾಯಿ ಹಗರಣವಾಗಿದೆ. ವಾಲ್ಮೀಕಿ(Valmiki Nigama Scam) ನಿಗಮದಲ್ಲಿ 187 ಕೋಟಿ ರೂಪಾಯಿ ಅಕ್ರಮವಾಗಿದೆ. ತಾವು ಅಪರಾಧಿ ಅಲ್ಲ ಎಂದು ಸ್ಪಷ್ಟಪಡಿಸಲು ವಿಧಾನಸಭೆ ಅಧಿವೇಶನದಲ್ಲಿ ಅವಕಾಶವಿತ್ತು. ನೀವು ಓಡಿ ಹೋದಿರಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದ್ದಾರೆ. ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿ ಇತರರು ಮಾತನಾಡಿದರು. ಈ ವೇಳೆ ಮಾಜಿ ಸಿಎಂ ಡಿ.ವಿ ಸದಾನಂದಗೌಡ, ಮಾಜಿ ಡಿಸಿಎಂ ಅಶ್ವತ್ಥನಾರಾಯಣ, ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ, ಪರಿಷತ್ ಸದಸ್ಯ ಸಿ.ಟಿ ರವಿ, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

WhatsApp Group Join Now
Telegram Group Join Now
Share This Article