Ad imageAd image

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ್ದ ತನಿಖೆಗೆ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

Nagesh Talawar
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಡಾ(MUDA Scam) ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ್ದ ತನಿಖೆಗೆ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ(BJP Protest) ಪ್ರತಿಭಟನೆ ನಡೆಸಿದೆ. ಬಿಜೆಪಿ ಕಾರ್ಯಕರ್ತರು ಸಿಎಂ ಅಧಿಕೃತ ನಿವಾಸ ಕುಮಾರಕೃಪಾಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ನಾನ್ಯಾಕೆ ರಾಜೀನಾಮೆ ಕೊಡಬೇಕು. ಇದು ಬಿಜೆಪಿ ಹಾಗೂ ಜೆಡಿಎಸ್ ನ ದ್ವೇಷದ ರಾಜಕಾರಣ. ಈ ಕುರಿತು ಕಾನೂನು ತಜ್ಞರ ಜೊತೆಗೆ ಚರ್ಚಿಸಿ ಮುಂದಿನ ಹೋರಾಟದ ರೂಪುರೇಷಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ. ಜನರ ಆಶೀರ್ವಾದ, ಪಕ್ಷದ ಶಾಸಕರು, ಸಚಿವರು, ಹೈಕಮಾಂಡ್ ಬೆಂಬಲವಿದೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
Share This Article