ಸಚಿವ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Nagesh Talawar
ಸಚಿವ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಗುತ್ತಿಗೆದಾರ ಸಚಿನ್ ಪಾಂಚಾಲ ಎಂಬುವರ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುಂದೆ ಮಂಗಳವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಚಿವರ ರಾಜೀನಾಮೆಗೆ ಆಗ್ರಹಿಸಿ ಅವರ ಮನೆ ಗೋಡೆಗೆ ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಎಂಎಲ್ಸಿ ಸಿ.ಟಿ ರವಿ ಸೇರಿ ಇತರರನ್ನು ಪೊಲೀಸರು ವಶಕ್ಕೆ ಪಡೆದರು.

ಈ ಘಟನೆ ಸಂಬಂಧ ಸಿ.ಟಿ ರವಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಪ್ರಾಮಾಣಿಕ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಸೈಡ್ ಭಾಗ್ಯ ಹಾಗೂ ರಾಜಕೀಯ ಎದುರಾಳಿಗಳಿಗೆ ಸುಪಾರಿ ಭಾಗ್ಯದ ಗ್ಯಾರೆಂಟಿ ನೀಡಿದ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಮತ್ತು ಗುತ್ತಿಗೆದಾರ ಸಾವಿಗೆ ಕಾರಣೀಭೂತರಾದ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು ಎಂದು ಕಿಡಿ ಕಾರಿದ್ದಾರೆ.

ಈ ವೇಳೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯ ಎನ್.ರವಿಕುಮಾರ್, ಜಿ.ಎಸ್ ಅಶ್ವತ್ಥನಾರಾಯಣ, ಉಮೇಶ್ ಶೆಟ್ಟಿ ಸೇರಿದಂತೆ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

WhatsApp Group Join Now
Telegram Group Join Now
Share This Article