ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ದೆಹಲಿ ವಿಧಾನಸಭೆಯ ಮಾಜಿ ವಿಪಕ್ಷ ನಾಯಕ, ದೆಹಲಿ ಬಿಜೆಪಿಯ ಮೊದಲ ಅಧ್ಯಕ್ಷ ವಿಜಯಕುಮಾರ ಮಲ್ಹೋತ್ರಾ ಮಂಗಳವಾರ ನಿಧನರಾಗಿದ್ದಾರೆ. 93 ವರ್ಷದ ಅವರು ಕಳೆದ ಹಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಲ್ಹೋತ್ರಾ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.
2008ರಲ್ಲಿ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದರು. ಆದರೆ, ಅಂದು ಕಾಂಗ್ರೆಸ್ ಭರ್ಜರಿ ಜಯ ಗಳಿಸಿತು. ಹೀಗಾಗಿ ಶೀಲಾ ದೀಕ್ಷಿತ್ ಮುಖ್ಯಮಂತ್ರಿಯಾದರು. ಮಲ್ಹೋತ್ರಾ ನಿಧನಕ್ಕೆ ದೆಹಲಿ ಸರ್ಕಾರವು ಇಂದಿನ ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.