ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರು ಕಳೆದ ಎರಡು ದಿನಗಳಿಂದ ಅಹೋರಾತ್ರಿ ಧರಣಿ ನಡೆಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದು, ಇಂದು ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕುವ ಯೋಜನೆ ಇದೆ ಎಂದು ಹೇಳಲಾಗುತ್ತಿದೆ. ಇಂದು ಶೇಷಾದ್ರಿಪುರಂ ರಸ್ತೆಯನ್ನು ಬಂದ್ ಮಾಡುವ ಮೂಲಕ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಮುಂದಾಗಿದೆಯಂತೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎಂಎಲ್ಸಿ ಸಿ.ಟಿ ರವಿ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಅನೇಕ ನಾಯಕರು ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದ್ದು, ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯುವ ತನಕ ಹೋರಾಟವೆಂದು ಘೋಷಣೆ ಕೂಗಿದ್ದಾರೆ. ಈ ಪ್ರತಿಭಟನೆಯ ಮುಂದುವರೆದ ಭಾಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧರಾಗಿದ್ದಾರಂತೆ. ಹೀಗಾಗಿ ಇಂದು ಏನೆಲ್ಲ ಬೆಳವಣಿಗೆ ಆಗುತ್ತಾ ಅನ್ನೋ ಕುತೂಹಲವಿದೆ.