ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ 2 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದೆ. ಎಲ್ಲರ ನಿರೀಕ್ಷೆಯಂತೆ ಹಾವೇರಿ ಶಿಗ್ಗಾಂವ ಕ್ಷೇತ್ರಕ್ಕೆ ಸಂಸದ ಬಸವರಾಜ್ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿಗೆ ಹಾಗೂ ಸಂಡೂರಿನ ಕ್ಷೇತ್ರಕ್ಕೆ ಜರ್ನಾಧನ್ ರೆಡ್ಡಿ ಆಪ್ತ ಬಂಗಾರು ಹನುಮಂತುಗೆ ಟಿಕೆಟ್ ಘೋಷಿಸಲಾಗಿದೆ.
ಇನ್ನು ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ವಿಚಾರ ಸಾಕಷ್ಟು ಜಟಾಪಟಿಯಿದೆ. ಬಿಜೆಪಿಯಿಂದ ಸಿ.ಪಿ ಯೋಗೇಶ್ವರ್ ಸ್ಪರ್ಧಿಸಬೇಕು ಎಂದು ಆರಂಭದಿಂದಲೂ ಹೇಳುತ್ತಿದ್ದಾರೆ. ನಾನೇ ಅಭ್ಯರ್ಥಿ ಎಂದು ಸಹ ಹೇಳಿದ್ದಾರೆ. ಆದರೆ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಾವು ಪ್ರತಿನಿಧಿಸಿ ಗೆದ್ದ ಕ್ಷೇತ್ರದಲ್ಲಿ ಪುತ್ರ ನಿಖಿಲ್ ಗೆ ನಿಲ್ಲಿಸಬೇಕು ಎನ್ನುವ ಬಯಕೆ ಹೊಂದಿದ್ದಾರೆ. ಹೀಗಾಗಿ ಇಲ್ಲಿ ಒಂದಿಷ್ಟು ಫೈಟ್ ನಡೆದಿದೆ. ಕೆಲ ಮೂಲಗಳ ಪ್ರಕಾರ ಸಿ.ಪಿ ಯೋಗೇಶ್ವರ್ ಜೆಡಿಎಸ್ ಚಿಹ್ನೆ ಅಡಿ ನಿಲ್ಲಲಿದ್ದಾರೆ ಎಂದು ಹೇಳಲಾಗುತ್ತಿದೆ. ಏನಾಗುತ್ತೆ ಕಾದು ನೋಡಬೇಕು.