ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಬಿಜೆಪಿಯಿಂತ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಇನ್ನೆರಡು ತಿಂಗಳಲ್ಲಿ ಬಿಜೆಪಿ ಸೇರ್ಪಡೆಯಾಗುತ್ತೇನೆ. ನಮ್ಮ ಶಕ್ತಿ, ಸಾಮರ್ಥ್ಯ ಏನು ಅನ್ನೋದು ಪಕ್ಷಕ್ಕೆ ಅರ್ಥ ಆದ್ಮೇಲೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದಿದ್ದಾರೆ. ಕೆಲವು ತಿಂಗಳ ಹಿಂದೆ ಯತ್ನಾಳ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ.
ಶಕ್ತಿ, ಸಾಮರ್ಥ್ಯ ಇಲ್ಲದವರು ಯಡಿಯೂರಪ್ಪ ಮನೆ ಎಂದು ಅಪ್ಪಾಜಿ ಎಂದು, ವಿಜಯೇಂದ್ರ ಬಳಿ ಕೈ ಕಟ್ಟಿಕೊಂಡು ನಿಂತುಕೊಳ್ಳುತ್ತಾರೆ. ಈ ಮೂಲಕ ಶೀಘ್ರದಲ್ಲಿ ಬಿಜೆಪಿ ಸೇರುವ ಸುಳಿವು ನೀಡಿದ್ದಾರೆ. ಇನ್ನು ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಹತ್ಯೆಯ ಸಂಚಿನ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಮಾಹಿತಿ ಇಲ್ಲ. ಅರವಿಂದ್ ಬೆಲ್ಲದ್ ಅವರನ್ನು ಕೇಳಿ. ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲು ಈತ ಯಾರು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಕಿಡಿ ಕಾರಿದರು.