ಪ್ರಜಾಸ್ತ್ರ ಸುದ್ದಿ
ದಾವಣಗೆರೆ(Davanagere): ಮನೆಯಲ್ಲಿನ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾವಣಗೆರೆ ನಗರದ ದುರ್ಗಿ ಗುಡಿ ಹತ್ತಿರದ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದೆ. 11 ವರ್ಷದ ಸ್ವೀಕೃತಿ ಅನ್ನೋ ಬಾಲಕಿ ಮೃತಪಟ್ಟಿದ್ದಾಳೆ.
ಸುನೀತಾಬಾಯಿ, ತೀರ್ಥಿಬಾಯಿ, ಹೂವಾ ನಾಯ್ಕ ಅನ್ನೋ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕುಟುಂಬಸ್ಥರಲ್ಲಿ ನೀರವ ಮೌನ ಆವರಿಸಿಕೊಂಡಿದೆ.