Ad imageAd image

ಮಣಿಪುರದಲ್ಲಿ ಬಾಂಬ್ ದಾಳಿ, ಇಬ್ಬರು ಮಕ್ಕಳ ಸಾವು

Nagesh Talawar
ಮಣಿಪುರದಲ್ಲಿ ಬಾಂಬ್ ದಾಳಿ, ಇಬ್ಬರು ಮಕ್ಕಳ ಸಾವು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಇಂಪಾಲ್(Impal): ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಮೋಯಿರಾಂಗ್ ಟ್ರೊಂಗ್ಲಾವೊಬಿ ಪ್ರದೇಶದ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದೆ. ಇಬ್ಬರು ಮಕ್ಕಳು ಮೃತಪಟ್ಟಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಷ್ಣುಪುರ ಜಿಲ್ಲೆಯಲ್ಲಿ ಶಂಕಿತ ಉಗ್ರರು ಬಾಂಬ್ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮಾನವೀಯ ಕೃತ್ಯದಲ್ಲಿ 6 ವರ್ಷದ ಬಾಲಕ, 6 ತಿಂಗಳ ಹೆಣ್ಣು ಮಗು ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಆಕ್ರೋಶಗೊಂಡ ಪ್ರತಿಭಟನಾಕಾರರು ಪೆಟ್ರೋಲ್ ಬಂಕ್ ಬಳಿಯಿದ್ದ ಟ್ರಕ್ ಹಾಗೂ ಎರಡು ತೈಲ ಟ್ಯಾಂಕರ್ ಗಳಿಗೆ ಬೆಂಕಿ ಹಚ್ಚಿದ್ದಾರೆ. ಪೊಲೀಸ್ ಚೌಕಿಯನ್ನು ಧ್ವಂಸಗೊಳಿಸಿದ್ದಾರೆ. ಮೋಯಿರಾಂಗ್ ಪೊಲೀಸ್ ಠಾಣೆ ಮುಂದೆ ಟೈರ್ ಸುಟ್ಟು ಧಿಕ್ಕಾರ ಕೂಗಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ.

WhatsApp Group Join Now
Telegram Group Join Now
Share This Article