ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಶನಿವಾರ ಮುಂಜಾನೆ ಇಲ್ಲಿನ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಹಿಂದೆ ಇದೆ ರೀತಿ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಇದೀಗ ವಸಂತ್ ಕುಂಜ್ನ ರಯಾನ್ ಇಂಟರ್ ನ್ಯಾಷನಲ್ ಶಾಲೆ, ದೆಹಲಿ ಪಬ್ಲಿಕ್ ಶಾಲೆ ಸೇರಿದಂತೆ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ.
ಶಾಲೆಗಳಿಗೆ ಅಗ್ನಿಶಾಮಕ ಸಿಬ್ಬಂದಿ, ಬಾಂಬ್ ನಿಷ್ಕ್ರೀಯ ದಳ, ಶ್ವಾನ ತಂಡ, ಪೊಲೀಸರು ಆಯಾ ಶಾಲೆಗಳಿಗೆ ತೆರಳಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾರಿ ಅಲ್ಲಾ ಎನ್ನುವ ಹೆಸರಿನಲ್ಲಿ ಗ್ರೂಪ್ ಮೇಲ್ ಬಂದಿದೆ. ಮುಂಜಾನೆ 6.9ಕ್ಕೆ ಡಿಪಿಎಸ್ ಆರ್ ಕೆ ಪುರಂನಲ್ಲಿ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಅಗ್ನಿಶಾಮಕ ಸೇವೆಗಳ ಅಧಿಕಾರಿ ತಿಳಿಸಿದ್ದಾರೆ.