ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಶಿಗ್ಗಾಂವಿಯಲ್ಲಿ ನಾನು ಇಷ್ಟು ಒಂದಿಷ್ಟು ಒಳ್ಳೆಯ ಕೆಲಸ ಮಾಡಿದ್ದೇನೆ. ಇದೆ ಕಾರಣಕ್ಕೆ ಅಲ್ಲಿ ನನ್ನ ಮಗ ಭರತ್ ಹೆಸರು ಟಿಕೆಟ್ ವಿಚಾರವಾಗಿ ಚರ್ಚೆಯಾಗುತ್ತಿದೆ. ಆದರೆ, ವೈಯಕ್ತಿಕ ಕಾರಣದಿಂದಾಗಿ ಮಗನ ಸ್ಪರ್ಧೆ ಬೇಡ ಎಂದಿದ್ದೇನೆ ಎಂದು ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು. ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿದ ಅವರು, ಶಿಗ್ಗಾಂವಿ, ಸಂಡೂರ, ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿ ಗೆಲ್ಲಲು ಏನು ಮಾಡಬೇಕು ಎನ್ನುವುದರ ಕುರಿತು ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚಿಸುತ್ತೇವೆ ಎಂದರು.
ಜೆ.ಪಿ ನಡ್ಡಾ ಅವರು ಕರೆದಿದ್ದು, ಇಲ್ಲಿಗೆ ಬಂದಿದ್ದೇವೆ. ಮಹಾರಾಷ್ಟ್ರ, ಜಾರ್ಖಾಂಡ್ ಸಂಸದೀಯ ಮಂಡಳಿಯ ಸಭೆಯ ಬಳಿಕ ನಮಗೆ ಸಮಯ ನೀಡಲಿದ್ದು, ಶಿಗ್ಗಾಂವಿಯಲ್ಲಿ ಯಾರು ಗೆಲ್ಲುತ್ತಾರೆ ಎನ್ನುವುದರ ಆಧಾರದ ಮೇಲೆ ಟಿಕೆಟ್ ನಿರ್ಧಾರವಾಗುತ್ತೆ. ನಾಳೆಯ ಸಭೆಯಲ್ಲಿ ಚರ್ಚೆಗೆ ಬರಲಿದೆ. ಕಾಂಗ್ರೆಸ್ ಆಡಳಿತದಲ್ಲಿ ರೈತರು ಸಾಕಷ್ಟು ಕಷ್ಟ ಎದುರಿಸುತ್ತಿದ್ದಾರೆ. ಆರ್ಥಿಕ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ಇಂತಹ ಸಂದರ್ಭದಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಅಂತಾ ಹೇಳಿದರು.