ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ(Hubballi): ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಾಲಕನೊಬ್ಬ ಬಲಿಯಾದ ಘಟನೆ ಶೇಜಾವಾಡಕರ್ ಹತ್ತಿರ ನಡೆದಿದೆ. ಬಿಜೆಪಿ ಮುಖಂಡ ವೀರೇಶ ಸಂಗಳದ ಎಂಬುವರ 15 ವರ್ಷದ ಮಗ ನಮೀಶ್ ಮೃತಪಟ್ಟಿದ್ದಾನೆ. ಐಷಾರಾಮಿ ಆಡಿ ಕಾರ್ ಹಾಗೂ ಬೈಕ್ ನಡುವೆ ಹೈಸ್ಪೀಡ್ ಸ್ಟಂಟ್ ಮಾಡಲು ಹೋಗಿ ಈ ಘಟನೆ ನಡೆದಿದೆ.
ಮೈಸೂರಿನಲ್ಲಿ 9ನೇ ತರಗತಿ ಓದುತ್ತಿದ್ದ ನಮೀಶ್ ಯಗಾದಿ ರಜೆಗಾಗಿ ಹುಬ್ಬಳ್ಳಿಗೆ ಬಂದಿದ್ದ. ಸ್ನೇಹಿತರೊಂದಿಗೆ ರೀಲ್ಸ್ ಮಾಡಲು ಹೋಗಿದ್ದಾನೆ. ಹೈಸ್ಪೀಡ್ ಬೈಕ್ ಹಾಗೂ ಆಡಿ ಕಾರು ಬಳಸಿ ಅಪಘಾತಕ್ಕೀಡು ಮಾಡುವುದು ಆಯೋಜನೆಯಾಗಿತ್ತು. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಸಹ ಆಗಿತ್ತು. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲೈಸೆನ್ಸ್ ಇಲ್ಲದ ಅಪ್ರಾಪ್ತನಿಗೆ ಕಾರು ಕೊಟ್ಟಿರುವ ಬಗ್ಗೆಯೂ ತನಿಖೆ ನಡೆಯುತ್ತಿದೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




