Ad imageAd image

Breaking news: ಸಿಂದಗಿಯ ಮನ್ನಾಪುರದಲ್ಲಿ ಟೆಂಪೋ ಪಲ್ಟಿ, 35 ಜನರಿಗೆ ಗಾಯ

Nagesh Talawar
Breaking news: ಸಿಂದಗಿಯ ಮನ್ನಾಪುರದಲ್ಲಿ ಟೆಂಪೋ ಪಲ್ಟಿ, 35 ಜನರಿಗೆ ಗಾಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಬ್ರೇಕಿಂಗ್ ನ್ಯೂಸ್

ಸಿಂದಗಿ(Sindagi): ತಾಲೂಕಿನ ಮನ್ನಾಪುರ ಗ್ರಾಮದ ಹತ್ತಿರ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಸುಮಾರು 30ರಿಂದ 35 ಜನರು ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು 30-35 ಜನರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

ಗೋಲಗೇರಿ ಗೊಲ್ಲಾಳೇಶ್ವರ(Golageri gollaleshwar) ದೇವಸ್ಥಾನಕ್ಕೆ ಹೊರಟಿದ್ದಾಗ ಸಿಂದಗಿ ಶಹಾಪೂರ ಮಾರ್ಗದಲ್ಲಿ ಬರುವ ಮನ್ನಾಪುರ ಗ್ರಾಮದ ಹತ್ತಿರ ಅಪಘಾತ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಕ್ಕನ್ನಗುತ್ತಿ ಗ್ರಾಮದವರು ಗೋಲಗೇರಿ ಗೊಲ್ಲಾಳೇಶ್ವರ ದೇವಸ್ಥಾನದಲ್ಲಿ ಜವಳ ಕಾರ್ಯಕ್ರಮಕ್ಕೆ ಹೊರಟಿದ್ದಾಗ ಅಪಘಾತ ನಡೆದಿದೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಗ್ಗೆ ಮಾಹಿತಿ ತಿಳಿದ ಬಳಿಕ ಶಾಸಕ ಅಶೋಕ ಮನಗೂಳಿ(Ashok Managoli) ಅವರು ತಾಲೂಕು ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅವರಿಗೆ ಸೂಕ್ತ ರೀತಿಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು. ಅಲ್ಲದೇ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಜಿಲ್ಲಾಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದು, ಜಿಲ್ಲಾಸ್ಪತ್ರೆಯವರೊಂದಿಗೂ ಶಾಸಕರು ಮಾತನಾಡಿ ವ್ಯವಸ್ಥೆಗೆ ಸೂಚಿಸಿದ್ದಾರೆ. ಇನ್ನು ಮಾಜಿ ಶಾಸಕ ರಮೇಶ ಭೂಸನೂರ(Ramesh Bhosanora) ಸಹ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ವೈದ್ಯರಿಗೆ ತಿಳಿಸಿದ್ದಾರೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

WhatsApp Group Join Now
Telegram Group Join Now
Share This Article