ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ತಾಲೂಕಿನಲ್ಲಿ ಮತ್ತೊಂದು ಬಸ್ ಅಪಘಾತ ಸಂಭವಿಸಿದೆ. ಶನಿವಾರ ಮಧ್ಯಾಹ್ನ ಸಿಂದಗಿ-ಕೆಂಭಾವಿ ನಡುವೆ ಸಂಚರಿಸುವ ಬಸ್ ರಸ್ತೆ ಪಕ್ಕದ ಗುಂಡಿಗೆಗೆ ನುಗ್ಗಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಕುರಿಗಳು ಅಡ್ಡ ಬಂದಿದ್ದರಿಂದ ಚಾಲಕ ಅವುಗಳನ್ನು ತಪ್ಪಿಸಲು ಹೋದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಇನ್ನು ಈ ಭಾಗದ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ. ಸ್ವಲ್ಪ ವಾಹನಗಳನ್ನು ರಸ್ತೆ ಪಕಕ್ಕೆ ತೆಗೆದುಕೊಳ್ಳಲು ಹೋದರೆ ಸಾಕು ಪಲ್ಟಿಯಾಗುತ್ತವೆ ಎಂದು ಸಾರ್ವಜನಿಕರು ಕಿಡಿ ಕಾರುತ್ತಿದ್ದಾರೆ. ಇತ್ತೀಚೆಗೆ ಮನ್ನಾಪುರ ಹತ್ತಿರ ಅಸಂತಪುರಕ್ಕೆ ಹೋಗುವ ಬಸ್ ಪಲ್ಟಿಯಾಗಿದೆ. ಆಗ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಇದೀಗ ಮತ್ತೊಂದು ಘಟನೆ ನಡೆದಿದೆ.