ಪ್ರಜಾಸ್ತ್ರ ಸುದ್ದಿ
ಹಾವೇರಿ(Haveri): ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದೆ. ಇಬ್ಬರು ಮೃತಪಟ್ಟಿದ್ದು, ಓರ್ವ ಗಾಯಗೊಂಡಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಹತ್ತಿರ ನಡೆದಿದೆ. ದಾವಣಗೆರೆ ಮೂಲದ ಪ್ರವೀಣ್ ಹಾಗೂ ಇನ್ನೋರ್ವ ಮೃತಪಟ್ಟಿದ್ದಾರೆ. ಕೊಟ್ಟೇಶ್ ಎಂಬುವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.