ಪ್ರಜಾಸ್ತ್ರ ಸುದ್ದಿ
ಉಳ್ಳಾಲ: ಬಸ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಹತ್ತಿರ ಗುರುವಾರ ನಡೆದಿದೆ. ಬಸ್ ಹಿಮ್ಮುಖವಾಗಿ ಚಲಿಸಿದ ಬಸ್ ನಿಂತಿದ್ದವರಿಗೆ ಹಾಗೂ ಆಟೋಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದಾರೆ. ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಠಾಣೆ ವ್ಯಾಪ್ತಿಯಲ್ಲಿ ಇಂತಹದೊಂದು ದುರಂತ ನಡೆದಿದೆ. ನಿಂತಿದ್ದವರ ಮೇಲೆ ಏಕಾಏಕಿ ಹಿಮ್ಮುಖವಾಗಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಅದರ ಅಡಿಯಲ್ಲಿ ಸಿಕ್ಕು ಮೃತಪಟ್ಟಿದ್ದಾರೆ. ಈ ಭೀಕರತೆಯ ದೃಶ್ಯ ಅಲ್ಲಿಂದ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ.