ಪ್ರಜಾಸ್ತ್ರ ಸುದ್ದಿ
ಮಂಗಳೂರು(Mangalore): ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 18ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಹತ್ತಿರದ ಲಾವತಡ್ಕ ಸಮೀಪ ಹಿಟಾಚಿ ಯಂತ್ರ ಹೊತ್ತುಕೊಂಡಿದ್ದ ಲಾರಿ ನಿಂತಿದೆ. ಧರ್ಮಸ್ಥಳದೊಂದಿಗೆ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.
ಕಾರ್ಕಳದ ಪಡುಮನೆ ನಿವಾಸಿ ಶಂಕರನಾರಾಯಣ ಭಟ್(41) ಮೃತ ಪ್ರಯಾಣಿಕನೆಂದು ತಿಳಿದು ಬಂದಿದೆ. ಗಾಯಗೊಂಡ 14 ಜನರಲ್ಲಿ ಐವರನ್ನು ಮಂಗಳೂರಿನ ಎಜೆ ಆಸ್ಪತ್ರೆ, ನಾಲ್ವರನ್ನು ಇಂಡಿಯನ್ ಆಸ್ಪತ್ರೆಗೆ ಹಾಗೂ ಉಳಿದವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.