ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಾಲ್ಕು ಘಟಕಗಳ ಸಾರಿಗೆ ನೌಕರರು ಆಗಸ್ಟ್ 5ರಂದು ನೀಡಿದ್ದ ಮುಷ್ಕರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಮಂಗಳವಾರ ವಿಚಾರಣೆಯನ್ನು ಮುಂದೂಡಿತ್ತು. ಆದರೆ, ಇಂದು ಸಾರಿಗೆ ನೌಕರರು ಮುಷ್ಕರ ನಡೆಸಿದ್ದು, ಬಸ್ ಸಂಚಾರ ಸ್ತಬ್ಧವಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುತ್ತಿದ್ದಾರೆ. ನಿತ್ಯ ಕಾಣಿಸಿಕೊಳ್ಳುವ ಪ್ರಮಾಣದಲ್ಲಿ ಬಸ್ ಗಳು ಇಲ್ಲದೆ ಇರುವುದರಿಂದ ನಿಲ್ದಾಣಗಳು ಬಿಕೋ ಎನ್ನುತ್ತಿವೆ.
ಇನ್ನು ಬೇರೆ ಬೇರೆ ಊರುಗಳಿಂದ ಬೆಂಗಳೂರಿಗೆ ಬಂದಿರುವ ಜನರು ತಮ್ಮ ಸ್ಥಳಗಳಿಗೆ ಹೋಗಲು ಬಸ್ ಗಳಿಲ್ಲದೆ ಪರದಾಡುತ್ತಿದ್ದಾರೆ. ಆಟೋ ಸೇರಿದಂತೆ ಖಾಸಗಿ ವಾಹನಗಳನ್ನು ಜನರು ಆಶ್ರಯಿಸಿದ್ದು, ದುಬಾರಿ ಹಣ ಕೊಟ್ಟು ಹೋಗಬೇಕಾದ ಪರಿಸ್ಥಿತಿ ಬಂದಿದೆ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.