ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ವಿಚಾರ ಸಂಬಂಧ ಆಯೋಗ ರಚನೆ ಮಾಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಹೆಚ್.ಕೆ ಪಾಟೀಲ ಹೇಳಿದರು. ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದೆ ಎಂದು ತಿಳಿಸಿದರು.
3 ತಿಂಗಳ ಒಳಗಾಗಿ ವರದಿ ಸಲ್ಲಿಸಬೇಕು. ಅಲ್ಲಿಯ ತನಕ ಹೊಸ ನೇಮಕಾತಿ ಮಾಡುವುದಿಲ್ಲ. ಸಧ್ಯ ಜಾರಿಯಲ್ಲಿರುವ ನೇಮಕಾತಿ ಪ್ರಕ್ರಿಯೆ ಮುಂದುವರೆಯಲಿದೆ. 2022ರಲ್ಲಿ ಸದಾಶಿವ ಆಯೋಗದ ವರದಿಯನ್ನು ಬಿಜೆಪಿ ತಿರಸ್ಕರಿಸಿದೆ. ದತ್ತಾಂಶ ಪಡೆಯುವ ವಿಚಾರವನ್ನು ಆಯೋಗಕ್ಕೆ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಹೆಚ್.ಸಿ ಮಹಾದೇವಪ್ಪ ಹೇಳಿದರು.