ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್(Covid Scam) ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಎಸ್ಐಟಿ ರಚನೆಗೆ ಒಪ್ಪಿಗೆ ಸಿಕ್ಕಿದೆ. ಈ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ ತಿಳಿಸಿದ್ದಾರೆ. ರಾಜ್ಯ ಸರ್ಕಾರ ನೇಮಿಸಿದ್ದ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಆಯೋಗ ಮಧ್ಯಂತರ ವರದಿ ನೀಡಿದೆ. ವರದಿ ಆಧರಿಸಿ ಎಸ್ಐಟಿ ರಚನೆ ಮಾಡಲಾಗುವುದು ಎಂದಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ. ಈ ಕುರಿತು ಹಲವು ದೂರುಗಳು ದಾಖಲಾಗಿವೆ. ಈ ಕುರಿತು ಸಮಗ್ರ ತನಿಖೆಗೆ ಎಸ್ಐಟಿ(SIT) ರಚನೆ ಮಾಡಲಾಗಿದ್ದು, ಅಗತ್ಯ ಬಿದ್ದರೆ ಎಫ್ಐಆರ್ ದಾಖಲಿಸಲಾಗುವುದು. ಅದು ಯಾರ ವಿರುದ್ಧ ಎಂದು ಎಸ್ಐಟಿ ತೀರ್ಮಾನಿಸುತ್ತೆ ಎಂದು ಹೇಳಿದ್ದಾರೆ. ಇನ್ನು ಸನ್ನಡತೆ ಆಧಾರದ ಮೇಲೆ ವಿವಿಧ ಜೈಲುಗಳಲ್ಲಿರುವ 55 ಕೈದಿಗಳನ್ನು ಬಿಡುಗಡೆ ಮಾಡಲು ಸಹ ಸಚಿವ ಸಂಪುಟ ತೀರ್ಮಾನಿಸಿದೆ.