ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯ ಸಚಿವ ಸಂಪುಟ ಪುನರ್ ರಚನೆ ಆಗುತ್ತೆ ಎನ್ನುವ ಮಾತುಗಳು ಜೋರಾಗಿ ಕೇಳಿ ಬರುತ್ತಿವೆ. ಕೆಲ ಸಚಿವರು ತಾವು ತಮ್ಮ ಸ್ಥಾನ ಬಿಟ್ಟು ಕೊಡಲು ಸಿದ್ಧ ಎಂದು ಹೇಳುತ್ತಿದ್ದಾರೆ. ಹೀಗಾಗಿ ಸಂಪುಟ ಸೇರಲು ಶಾಸಕರು ಕಸರತ್ತು ನಡೆಸಿದ್ದಾರೆ. ಇದರ ನಡುವೆಯೇ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾನುವಾರ ರಾತ್ರಿಯೇ ದೆಹಲಿಗೆ ತೆರಳಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.
ಸಿಎಂ ಬದಲಾವಣೆಯ ಮಾತುಗಳ ನಡುವೆ ಇದೀಗ ಸಚಿವ ಸಂಪುಟಕ್ಕೆ ಸರ್ಜರಿ ಎನ್ನಲಾಗುತ್ತಿದೆ. ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ ಸೇರಿ ಅನೇಕರು ತಮ್ಮ ಸ್ಥಾನ ತ್ಯಾಗ ಮಾಡಲು ಸಿದ್ಧರಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಯಾರನ್ನು ಕೈ ಬಿಟ್ಟು ಯಾರಿಗೆ ಸಚಿವ ಸ್ಥಾನ ನೀಡಲಾಗುತ್ತೆ ಎನ್ನುವ ನಿರೀಕ್ಷೆ ಮೂಡಿದೆ. ಇದರ ಜೊತೆಗೆ ಸಿಎಂ ಸ್ಥಾನವೂ ಬದಲಾವಣೆಯಾಗುತ್ತಾ ಅನ್ನೋ ಪ್ರಶ್ನೆ ಸಹ ಇದೆ. ನವೆಂಬರ್ ಇದೆಕ್ಕೆಲ್ಲ ಉತ್ತರ ಸಿಗಲಿದೆ.




