ಪ್ರಜಾಸ್ತ್ರ ಸುದ್ದಿ
ರಾಮನಗರ(Ramanagara): ಮೈಸೂರು ಕಡೆ ಹೊರಟಿದ್ದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಂಗನಬಸವದೊಡ್ಡಿ ಹತ್ತಿರದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನ ಶಿವಾಜಿನಗರದ ಗುಜರಿ ವ್ಯಾಪಾರಿ ಲಿಯಾಖತ್ ಅಲಿ ಖಾನ್(55), ಪತ್ನಿ ಅಸ್ಮಾ ಪರ್ವೀನ್(45) ಹಾಗೂ ಸ್ನೇಹಿತ ನೂರ್ ಉಲ್ಲಾ ಷರೀಫ್(50) ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ.
ಮೈಸೂರಿನಲ್ಲಿರುವ ಮಗಳ ಮನೆಗೆ ಲಿಯಾಖತ್ ಸ್ನೆಹಿತನ ಕಾರಿನಲ್ಲಿ ಹೊರಟಿದ್ದರು. ಕಾರು ಓಡಿಸುತ್ತಿದ್ದ ನೂರು ಉಲ್ಲಾ ಷರೀಫ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೆಂಗಳೂರು ಕಡೆ ಹೊರಟಿದ್ದ ಕೆಎಸ್ಆರ್ ಟಿಸಿ ಅಶ್ವಮೇಧ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ. ರಾಮನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.