ಪ್ರಜಾಸ್ತ್ರ ಸುದ್ದಿ
ಚೆನ್ನೈ(Chennai): ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಟನೆ ಸಂಬಂಧ ನಟ, ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ವಿಜಯ್ ವಿರುದ್ಧ ಪ್ರಕರಣ ದಾಖಲಾಗಿದೆ. ಪೆರಂಬೂರಿನಲ್ಲಿ ಪ್ರಚಾರ ನಡೆಸುವಾಗ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಚುನಾವಣಾ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ಪೆರಂಬೂರು ಹಾಗೂ ಕೊಳತ್ತೂರಿನಲ್ಲಿ ನಡೆದ ಚುನಾವಣಾ ರ್ಯಾಲಿಯ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತ ಉಲ್ಲಂಘಿಸಲಾಗಿದೆ ಎಂದು ಚುನಾವಣಾಧಿಕಾರಿ ಕುಮಾರ್ ಅವರು ದೂರು ನೀಡಿದ್ದಾರೆ. ಐದು ಸೆಕ್ಷನ್ ಗಳ ಅಡಿಯಲ್ಲಿ ವಿಜಯ್ ವಿರುದ್ಧ ಪ್ರಕರಣ ದಾಖಲಾಗಿದೆ.




