ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಬಂದಿದೆ ಎನ್ನುವ ಕಾರಣಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ, ಅದನ್ನು ಹಂಚಿಕೊಂಡ ಸಂಸದ ತೇಜಸ್ವಿಸೂರ್ಯ ಹಾಗೂ ಇಬ್ಬರು ಸಂಪಾದಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹಾವೇರಿಯ ಸೆನ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಈ ಕುರಿತು ಮೂವರಿಗೆ ನೋಟಿಸ್ ನೀಡಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿಸೂರ್ಯ, ಕನ್ನಡ ನ್ಯೂಸ್ ಹಾಗೂ ಕನ್ನಡ ದುನಿಯಾ ಡಿಜಿಟಲ್ ಮಾಧ್ಯಮಗಳ ಸಂಪಾದಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತ ರುದ್ರಪ್ಪನ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಬಂದಿದೆ ಎನ್ನುವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಪ್ರಕಟಿಸಲಾಗಿತ್ತು. ಈ ಸುದ್ದಿಯನ್ನು ಸಂಸದ ತೇಜಸ್ವಿಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು. ದ್ವೇಷ ಬಿತ್ತು, ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ.