ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ(DCM) ಡಿ.ಕೆ ಶಿವಕುಮಾರ್ ವಿರುದ್ಧ ಹಿಂದಿನ ಸರ್ಕಾರ ಸಿಬಿಐಗೆ(CBI) ನೀಡಿದ್ದ ಅನುಮತಿ ಸರ್ಕಾರ ಹಿಂದಕ್ಕೆ ಪಡೆದಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಿಬಿಐ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆಯನ್ನು ಗುರುವಾರ ನಡೆಸಿದ ಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನಿರಾಳರಾಗಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಸಿಬಿಐ ಅನುಮತಿಯನ್ನು ಈಗಿನ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿದೆ. ಇದನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ರಿಟ್ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್, ಇದು ರಾಜ್ಯ ಸರ್ಕಾರ ಹಾಗೂ ಸಿಬಿಐ ನಡುವಿನ ಪ್ರಕರಣವಾಗಿದೆ. ಇದನ್ನು ಸುಪ್ರೀಂ ಕೋರ್ಟ್(Supreme Court) ನಲ್ಲಿ ವಿಚಾರಣೆ ಮಾಡುವುದು ಸೂಕ್ತವೆಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.