ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಪ್ರಸಿದ್ದ ತಿರುಪತಿ ತಿಮ್ಮಪ್ಪನ(Tirupati Thimmappa) ದೇವಸ್ಥಾನದಲ್ಲಿ ನೀಡುವ ಲಡ್ಡುವಿನಲ್ಲಿ ಮೀನು, ದನ ಸೇರಿ ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಲಾಗುತ್ತಿದೆ ಎನ್ನುವ ಪ್ರಕರಣ ಸಂಬಂಧ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು(N.Chandrababu Naidu) ನಾಯ್ಡು ಅವರಿಗೆ ಕೇಂದ್ರ ಸರ್ಕಾರ ವರದಿ ಕೇಳಿದೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಲಡ್ಡು ವಿಚಾರಕ್ಕೆ ಸಂಬಂಧಿಸಿದಂತೆ ವಿಸ್ತೃತ ವರದಿ ನೀಡುವಂತೆ ಕೇಳಿದ್ದಾರೆ.
ದೇವಸ್ಥಾನಕ್ಕೆ ಕೋಟ್ಯಾಂತರ ಭಕ್ತರು ಭೇಟಿ ನೀಡುತ್ತಾರೆ. ಮುಖ್ಯಮಂತ್ರಿ ನೀಡುವ ಹೇಳಿಕೆಗಳನ್ನು ಎಲ್ಲರು ನಂಬುತ್ತಾರೆ. ಇದು ಗಂಭೀರ ಹಾಗೂ ಕಳವಳಕಾರಿಯಾದ ವಿಷಯವಾಗಿದೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ರಾಜ್ಯನಿಯಂತ್ರಕರೊಂದಿಗೆ ಚರ್ಚಿಸಿ ತನಿಖೆ ನಡೆಸುತ್ತೇನೆ. ಈಗ ಕೇಳಿರುವ ವರದಿ ಬಂದ ಬಳಿಕ ಪರಿಶೀಲಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಹೇಳಿದ್ದಾರೆ. ಹಿಂದಿನ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್(YS Jagan Mohan Reddy) ರೆಡ್ಡಿ ಸರ್ಕಾರವಿದ್ದ ಸಂದರ್ಭದಲ್ಲಿ ತಿರುಪತಿ(Tirupati Laddu) ಲಡ್ಡುಗೆ ತುಪ್ಪದ ಮಾದರಿಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂದು ಗುಜರಾತ್ ಸರ್ಕಾರದ ಲ್ಯಾಬ್ ವರದಿಯನ್ನು ಈಗಿನ ಸಿಎಂ ಎನ್.ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.