Ad imageAd image

ಸಚಿವ ಖರ್ಗೆ ಬಂಧನಕ್ಕೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

Nagesh Talawar
ಸಚಿವ ಖರ್ಗೆ ಬಂಧನಕ್ಕೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕಲಬುರಗಿಯಲ್ಲಿ ಗುತ್ತಿಗೆದಾರನೊಬ್ಬನ್ನ ಆತ್ಮಹತ್ಯೆ ಪ್ರಕರಣ ಸಂಬಂಧ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬಂಧನಕ್ಕೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ. ಶನಿವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮೃತ ಗುತ್ತಿಗೆದಾರ ಸಚಿನ್ 7 ಪುಟಗಳ ಡೆತ್ ನೋಟ್ ಸಾಮಾಜಿಕ ಜಾಲತಾಣದಲ್ಲಿಯೂ ಹಾಕಿದ್ದಾರೆ. ಇದರಲ್ಲಿ ಪ್ರಿಯಾಂಕ್ ಖರ್ಗೆ ಆಪ್ತರ ಹೆಸರುಗಳಿವೆ. ತನಿಖೆ ಸರಿಯಾಗಿ ನಡೆಯಲು ಅವರು ರಾಜೀನಾಮೆ ನೀಡಬೇಕು ಎಂದರು.

ಕರ್ನಾಟಕದಲ್ಲಿನ ವ್ಯವಸ್ಥೆ ಬೇರೆ. ಕಲಬುರಗಿಯಲ್ಲಿನ ವ್ಯವಸ್ಥೆಯೇ ಬೇರೆ. ರಿಪಬ್ಲಿಕ್ ಆಫ್ ಕಲಬುರಗಿ ಆಗಿದೆ. ತಮಗೆ ಬೇಕಾದವರನ್ನು ಮುಂದೆ ಮಾಡಿಕೊಂಡು ವ್ಯವಹಾರ ಮಾಡುತ್ತಿದ್ದಾರೆ. ಹೀಗಾಗಿ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು. ಬಂಧನ ಮಾಡಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

WhatsApp Group Join Now
Telegram Group Join Now
Share This Article