ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ದೇಶದಲ್ಲಿ ವಕ್ಫ್ ಬೋರ್ಡ್ ಇರಬಾರದು. ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದೆಂದು ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಬುಧವಾರ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ.
ನಿನ್ನೆಯ ದಿನ ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ ಅದಕ್ಕಾಗಿ ಹೃತಪೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ಮುಸಲ್ಮಾನರೂ ಈ ದೇಶದ ಪ್ರಜೆಗಳೆ. ಎಲ್ಲರಿಗೂ ಮತದಾನದ ಹಕ್ಕಿದೆ. ಮೂಲತಃ ಒಕ್ಕಲಿಗರು ದಧರ್ಮ ಸಹಿಷ್ಣುಗಳು. ನಮ್ಮ ಶ್ರೀಮಠಕ್ಕೆ ಮುಸ್ಲಿಮರು ಸಹ ಬಂದು ಹೋಗುತ್ತಾರೆ. ನಾವು ಸಹ ಮುಸ್ಲಿಮರ ಸಭೆ, ಸಮಾರಂಭ, ಮದುವೆಗಳಲ್ಲಿ ಭಾಗಿಯಾಗುತ್ತೇವೆ. ಈ ಜನಾಂಗದ ಬಗ್ಗೆ ಅಸಹಿಷ್ಣುತೆ ಹೊಂದಿಲ್ಲ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಭಾರತೀಕ ಕಿಸಾನ್ ಸಂಘದಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ದೇಶದಲ್ಲಿ ವಕ್ಫ್ ಬೋರ್ಡ್ ಇರಲೇಬಾರದು. ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದಿದ್ದರು.