Ad imageAd image

ವಕ್ಫ್ ಇಲ್ಲದಂತೆಯೇ ಮಾಡಬೇಕು: ಚಂದ್ರಶೇಖರ ಸ್ವಾಮೀಜಿ

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಭಾರತೀಯ ಕಿಸಾನ್ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

Nagesh Talawar
ವಕ್ಫ್ ಇಲ್ಲದಂತೆಯೇ ಮಾಡಬೇಕು: ಚಂದ್ರಶೇಖರ ಸ್ವಾಮೀಜಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಭಾರತೀಯ ಕಿಸಾನ್ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಇದರಲ್ಲಿ ಭಾಗವಹಿಸಿ ಮಾತನಾಡಿದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ, ದೇಶದಲ್ಲಿ ವಕ್ಫ್ ಇಲ್ಲದಂತೆಯೇ ಮಾಡಬೇಕು. ಮುಸ್ಲಿಂರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಹೇಳಿದ್ದಾರೆ.

ಮಂಗಳವಾರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರ ಹೋದರೂ ಚಿಂತೆಯಿಲ್ಲ. ವಕ್ಫ್ ಮಂಡಳಿ ಇಲ್ಲದಂತೆ ಮಾಡಬೇಕು. ರೈತರ ಜಮೀನಿಗಾಗಿ ಹೋರಾಟ ಮಾಡುವ ಸಂದರ್ಭ ಬಂದಿದೆ. ವಕ್ಫ್ ಇಲ್ಲದಿದ್ದರೆ ದೇಶದಲ್ಲಿ ಜನರು ನೆಮ್ಮದಿಯಿಂದ ಇರಬಹುದು ಎಂದಿದ್ದಾರೆ.

WhatsApp Group Join Now
Telegram Group Join Now
Share This Article