ಪ್ರಜಾಸ್ತ್ರ ಸುದ್ದಿ
ದಾವಣಗೆರೆ(Davanagere): ಹಲವು ಹೆಣ್ಮಕ್ಕಳಿಗೆ ಮೋಸ ಮಾಡಿ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪಿ ಅಮ್ಜದ್ ಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಸಲಾಗುತ್ತಿದೆ. ಅಲ್ಲದೆ ಚನ್ನಗಿರಿ ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆ ಕೊಟ್ಟಿವೆ. ಆರೋಪಿಗೆ ಜಾಮೀನು ನೀಡಬಾರದು. ಹಿಂದೂ ಹೆಣ್ಮಕ್ಕಳನ್ನು ಗುರಿಯಾಗಿಸಿಕೊಂಡು ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಹೇಳಿ ಭಜರಂಗದಳ, ಶ್ರೀರಾಮ ಸೇನೆ, ವಿಶ್ವ ಹಿಂದೂ ಪರಿಷತ್ ಸೇರಿ ವಿವಿಧ ಹಿಂದೂಪರ ಸಂಘಟನೆಗಳಿಂದ ಬಂದ್ ಗೆ ಕರೆ ಕೊಡಲಾಗಿದೆ.
ಊರಬಾಗಿಲ ಆಂಜನೇಯ ದೇವಸ್ಥಾನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಇದರಲ್ಲಿ ವಿವಿಧ ಮಹಿಳಾ ಪರ ಸಂಘಟನೆಗಳು ಸಹ ಭಾಗವಹಿಸಿವೆ. ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಚನ್ನಗಿರಿ ಪಟ್ಟಣದಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿರುವ ಆರೋಪಿ ಅಪ್ರಾಪ್ತೆಯರನ್ನು, ಯುವತಿಯರನ್ನು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಇತನ ಕಂಪ್ಯೂಟರ್ ನಲ್ಲಿ ಸಾಕಷ್ಟು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ದಾವಣಗೆರೆಯ ಅರಸು ಬಡಾವಣೆಯ ನಿವಾಸಿಯಾಗಿರುವ ಈತ ಚನ್ನಗಿರಿಯಲ್ಲಿ ಔಷಧಿ ಅಂಗಡಿ ಇಟ್ಟಿದ್ದ. ಅಲ್ಲಿಯೂ ಮನೆ ಮಾಡಿಕೊಂಡು ವಾಸವಾಗಿದ್ದ. ಇತನ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿ ಅಮ್ಜದ್ ನನ್ನು ಬಂಧಿಸಿದ್ದಾರೆ. ಇವನ ಕೃತ್ಯ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.